ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ರೌಡಿಶೀಟರ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ನಲ್ಲಿ ಪೊಲೀಸರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಂಡು ಹೋಗುತ್ತಿದ್ದ ವೇಳೆ ರೌಡಿಶೀಟರ್ ಸುನೀಲ್ ಅಲಿಯಾಸ್ ಹಾವೇರಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಅತ್ತಿಬೆಲೆಯ ಬಂಡಾಪುರ ಬಳಿ ಪೊಲೀಸರು ರೌಡಿಶೀಟರ್ ರೌಡಿಶೀಟರ್ ಸುನೀಲ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಆತನನ್ನು ವಶಕ್ಕೆ ಪಡೆದುಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.