ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಬೇಕಾರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ ಹೆಸರು ಕೇಳಿ ಬಂದಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಭೈರತಿ ಬಸವರಾಜ್ ಅವರನ್ನು ವಿಚಾರಣೆಗೂ ಕೂಡ ಒಳಪಡಿಸಿದ್ದರು. ಇದೀಗ ಹೈಕೋರ್ಟ್ ಭೈರತಿ ಬಸವರಾಜ್ ಅವರಿಗೆ ಬಿಗ್ ರಿಲೀಫ್ ನೀಡಿದ್ದು ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಮಧ್ಯಂತರ ಆದೇಶ ಹೊರಡಿಸಿದೆ.
ಹೌದು, ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಗೆ ಮಧ್ಯಂತರ ರಿಲೀಫ್ ಸಿಕ್ಕಿದ್ದು, ಬೈರತಿ ಬಸವರಾಜ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ನ್ಯಾ. ಎಂಐ ಅರುಣ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಇದೆ ವೇಳೆ ತನಿಖೆಗೆ ಸಹಕರಿಸಲು ಭೈರತಿ ಬಸವರಾಜ ಸೂಚನೆ ನೀಡಿತು. ಭೈರತಿ ಬಸವರಾಜ್ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದರು. ಬಿಕ್ಲು ಕಲು ಶಿವ ಕೊಲೆಯ ಪ್ರಕರಣದಲ್ಲಿ ಇದೀಗ ಬೈರತಿ ಬಸವರಾಜ್ ಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಈ ವಿಚಾರಣೆಗೆ ಸಹಕರಿಸಿದ್ದಾರೆ ಎಂದು ಭೈರತಿ ಬಸವರಾಜ್ ಅವರ ವಕೀಲರು ವಾದಿಸಿದರು.