ಬೆಂಗಳೂರು : ಬೆಂಗಳೂರಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಾಸಕ ಭೈರತಿ ಬಸವರಾಜ್ ಸಹೋದರನ ಮಗ ಅನೀಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಹೌದು ಭೈರತಿ ಬಸವರಾಜ್ ಸಹೋದರನ ಮಗ ಅನೀಲ್ ಎಂಬಾತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಯ ಬಳಿಕ ಮೂವರು ತಲೆ ಮರೆಸಿಕೊಂಡಿದ್ದರು. ಅದರಲ್ಲಿ ಅನೀಲ್ ಕೂಡ ಒಬ್ಬ ಇದೀಗ ಭಾರತಿ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.