ಹುಬ್ಬಳ್ಳಿ : ಕರ್ನಾಟಕ ಸರ್ಕಾರವನ್ನು ಕೆಡಲು ಬಿಜೆಪಿ ಸಂಚರಿಸುತಿದೆ ರಾಜ್ಯ ಸರ್ಕಾರ ಬಿಳಿಸಲು ಬಿಜೆಪಿಯವರು ಕಾಂಗ್ರೆಸ್ ಶಾಸಕರು 100 ಕೋಟಿ ಆಫರ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಆರೋಪಿಸಿದರು ಇದೀಗ ಇವರ ಹೇಳಿಕೆ ಕುರಿತು ಹುಬ್ಬಳ್ಳಿಯಲ್ಲಿ ಇವರ ವಿರುದ್ಧ ದಿಂದ ಹಾಕಲಾಗಿದೆ.
ಹೌದು ಹುಬ್ಬಳ್ಳಿಯ ಉಪನಗರ ಠಾಣೆಯಲ್ಲಿ ಶಾಸಕ ಗಣಿಗ ರವಿಕುಮಾರ್ ವಿರುದ್ಧ ಬಿಜೆಪಿ ನಾಯಕರು ದೂರು ನೀಡಿದ್ದಾರೆ. ಬಿಜೆಪಿ ವಿರುದ್ಧ ಆರೋಪ ಮಾಡಿರುವ ಗಣಿಗ ರವಿಕುಮಾರ್ ಅವರ ಬಳಿ ಏನಾದರೂ ದಾಖಲೆಗಳಿದ್ದರೆ ನೀಡಲಿ. ಸುಮ್ಮನೆ ಆರೋಪ ಮಾಡುವುದಲ್ಲ ಹಾಗಾಗಿ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹುಬ್ಬಳ್ಳಿ ಉಪನಗರ ಠಾಣೆಗೆ ಬಿಜೆಪಿ ನಾಯಕರು ದೂರು ಸಲ್ಲಿಸಿದ್ದಾರೆ. ಈ ವೇಳೆ ಪಿ ರಾಜೀವ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಶಾಸಕ ಗಣಿಗ ರವಿ ಹೇಳಿದ್ದೇನು?
ಕರ್ನಾಟಕ ಸರ್ಕಾರವನ್ನು ಕೆಡವಲು ಬಿಜೆಪಿ ಸಂಚು ರೂಪಿಸುತ್ತಿದೆ. ರಾಜ್ಯ ಸರ್ಕಾರವನ್ನು ಬೀಳಿಸಲು ರಾಜ್ಯದ ಮೂವರು ಸಂಸದರು ಪ್ರಧಾನಿ ಮೋದಿ ಅವರಿಗೆ ಮಾತು ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿಯ ಬ್ರೋಕರ್ಗಳು ನಮ್ಮ ಶಾಸಕರಿಗೆ 100 ಕೋಟಿ ರೂ. ಆಫರ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಕ ರವಿ ಆರೋಪ ಮಾಡಿದ್ದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವನ್ನು ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿಯವರು 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ, ಅಲುಗಾಡಿಸಲು ಆಗಲ್ಲ. ಆದರೆ, ಬಿ.ಎಲ್.ಸಂತೋಷ್, ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಲಾಗುತ್ತಿದೆ. ಕಾಂಗ್ರೆಸ್ ಐದು ವರ್ಷ ಅಧಿಕಾರದಲ್ಲಿರುತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ಹೇಳಿದರು.
ಸರ್ಕಾರ ಬೀಳಿಸುವುದಾಗಿ ಪ್ರಧಾನಿ ಮೋದಿ ಅವರಿಗೆ ಐದು ಜನ ಮಾತು ಕೊಟ್ಟಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯ ಬ್ರೋಕರ್ಗಳು ಡಿಮ್ಯಾಂಡ್ ಮಾಡುತ್ತಿದ್ದಾರೆ. ನಿತ್ಯ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ, ನಮ್ಮ ಶಾಸಕರು ಬಲಿಯಾಗಲ್ಲ. ನಾವು ಸಾಕ್ಷಿ ಕಲೆ ಹಾಕುತ್ತಿದ್ದೇವೆ, ಇಡಿ ಅಧಿಕಾರಿಗಳಿಗೆ ಕೊಡುತ್ತೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಇದೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯ ಯಾರಿಗೂ ತಾಕತ್ತಿಲ್ಲ ಎಂದರು.