ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಅವರ ವಿರುದ್ಧ ಮುಂಬೈನಲ್ಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿಂದ ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್ ನೀಡಿದೆ.
ನಿರ್ಮಾಪಕ ರಾಘವೇಂದ್ರ ಹೆಗಡೆ ಎಂಬುವರು ಮುಂಬೈನಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸರು ಧ್ರುವ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡಿದ್ದರು. ಧ್ರುವ ಸರ್ಜಾ ಅವರು, ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಹಣ ಪಡೆದು, ಸಿನಿಮಾ ಮಾಡಲು ಡೇಟ್ಸ್ ನೀಡದೆ ವಂಚನೆ ಮಾಡಿದ್ದಾರೆ ಎಂದು ರಾಘವೇಂದ್ರ ಹೆಗಡೆ ಎಂಬುವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್ ಧ್ರುವ ಸರ್ಜಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಇದೊಂದು ಸಿವಿಲ್ ಮೊಕದ್ದಮೆ ಆಗಿದ್ದು ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಮುಂದಿನ ವಿಚಾರಣೆ ವರೆಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ.