ಬೆಂಗಳೂರು : ರಾಜ್ಯದಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದು, ಈ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಮ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು.ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ…
— CM of Karnataka (@CMofKarnataka) January 22, 2025