Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಸ್ಲಾಮಾಬಾದ್‌ನಲ್ಲಿ ಇರಾನ್-ಅಮೆರಿಕ ಶಾಂತಿ ಮಾತುಕತೆ: ಇಸ್ರೇಲ್ ಮಾಧ್ಯಮಗಳಿಗೆ ಪಾಕಿಸ್ತಾನ ನಿಷೇಧ

11/04/2026 1:06 PM

BREAKING : ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಉದ್ಯಮಿಗೆ 15 ಕೋಟಿ ವಂಚನೆ : ಬೆಳಗಾವಿಯಲ್ಲಿ ಇಬ್ಬರು ಸೈಬರ್ ವಂಚಕರು ಅರೆಸ್ಟ್!

11/04/2026 1:04 PM

BREAKING : ಕಲಬುರ್ಗಿಯಲ್ಲಿ IPL ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ವ್ಯಕ್ತಿ, ಡ್ಯಾಮ್‌ಗೆ ಹಾರಿ ಆತ್ಮಹತ್ಯೆ!

11/04/2026 12:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `GBA’ ವ್ಯಾಪ್ತಿಯ ನೂತನ 5 ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ : DCM ಡಿ.ಕೆ.ಶಿವಕುಮಾರ್ ಘೋಷಣೆ
KARNATAKA

BREAKING : `GBA’ ವ್ಯಾಪ್ತಿಯ ನೂತನ 5 ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ : DCM ಡಿ.ಕೆ.ಶಿವಕುಮಾರ್ ಘೋಷಣೆ

By kannadanewsnow5703/09/2025 7:35 PM

ಬೆಂಗಳೂರು : ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ರವರು ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಛೇರಿಗೆ ಆಗಮಿಸಿ ಪೂಜೆ ಸಲ್ಲಿಸಿ ಜಿ.ಬಿ.ಎ ನಾಮಫಲಕ ಉದ್ಘಾಟಿಸಿದರು.

ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198 ವಾರ್ಡ್ ಗಳಿದ್ದವು. ಈಗ 500 ವಾರ್ಡ್ ಗಳ ರಚನೆಯ ಅನುಮತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಾಲಿಕೆಗಳ ಆಡಳಿತಾತ್ಮಕ ವೆಚ್ಚ, ಸಂಬಳ ಹಾಗೂ ನಿವೃತ್ತಿ ವೇತನಕ್ಕೆ ಎಂದು ಬಿಬಿಎಂಪಿಯಿಂದ ಸುಮಾರು 300 ಕೋಟಿ ರೂ. ಹಣ ಬಿಡುಗಡೆಗೆ ಮಾಡಲಾಗುವುದು” ಎಂದರು.

“ನಾಗರಿಕರು, ವಾಸ್ತುಶಿಲ್ಪಿಗಳು ಪಾಲಿಕೆ ಕಚೇರಿಗಳ ವಿನ್ಯಾಸ ಹೇಗಿರಬೇಕು ಎಂದು ಸಲಹೆ ನೀಡಬಹುದು. ಜೊತೆಗೆ ವಿನ್ಯಾಸಗಳನ್ನು ಸಹ ನೀಡಬಹುದು. ಇದರಲ್ಲಿ ಅತ್ಯುತ್ತಮ ಮೂರು ಅಥವಾ ಐದು ವಿನ್ಯಾಸಗಳನ್ನು ಆಯ್ಕೆ ಮಾಡಲಾಗುವುದು. ಇದಕ್ಕೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು” ಎಂದರು.

“ಪ್ರತಿ ಪಾಲಿಕೆಗಳಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು, ಒಬ್ಬರು ಕೆಎಎಸ್, ಇಬ್ಬರು ಮುಖ್ಯ ಎಂಜಿನಿಯರ್ ಗಳು ಹಾಗೂ ಅಗತ್ಯ ಕಚೇರಿ ಸಿಬ್ಬಂದಿ ಕೆಲಸ ಮಾಡಲಿದ್ದಾರೆ. ಬೆಂಗಳೂರು ನಗರಕ್ಕೆ ಉತ್ತಮವಾದ ಆಡಳಿತ ಹಾಗೂ ಜನರ ಬಾಗಿಲಿಗೆ ಸರ್ಕಾರವನ್ನು ತೆಗೆದುಕೊಂಡು ಹೋಗಬೇಕು ಎಂದು ನಿರ್ಣಯಗಳನ್ನು ತೆಗೆದುಕೊಂಡು ಪಾಲಿಕೆಗಳು ಕೆಲಸ ಮಾಡಲಿವೆ. ಪಾಲಿಕೆಗಳ ವ್ಯಾಪ್ತಿಗೆ ಬರುವ ರಸ್ತೆ, ಚರಂಡಿ ಸೇರಿದಂತೆ ಇತರೇ ಸಂಗತಿಗಳನ್ನು ಗುರುತಿಸುವ ಕೆಲಸವಾಗಲಿದೆ” ಎಂದು ಹೇಳಿದರು.

ಹೊಸ ಪ್ರದೇಶಗಳನ್ನು ಐದು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಕೇಳಿದಾಗ, “ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಸ್ಥಳೀಯ ಸಂಸ್ಥೆಗಳನ್ನು ಜಿಬಿಎ ವ್ಯಾಪ್ತಿಗೆ ಈಗಲೇ ಸೇರಿಸಿದರೆ ಪ್ರಸ್ತುತ ಪ್ರತಿನಿಧಿಗಳಾಗಿರುವವನ್ನೂ ಪಾಲಿಕೆ ಸದಸ್ಯರು ಎಂದು ಪರಿಗಣಿಸಬೇಕಾಗುತ್ತದೆ. ಮೊದಲು ಈಗ ರಚನೆಯಾಗಿರುವ ಪಾಲಿಕೆಗಳಿಗೆ ಚುನಾವಣೆ ನಡೆದ ನಂತರ ಇತರೇ ಪ್ರದೇಶಗಳ ವಿಲೀನದ ಬಗ್ಗೆ ಭವಿಷ್ಯದಲ್ಲಿ ಯೋಚಿಸಲಾಗವುದು” ಎಂದರು.

ನೂತನ ಆಯುಕ್ತರುಗಳ ಜವಾಬ್ದಾರಿಗಳ ಬಗ್ಗೆ ಕೇಳಿದಾಗ, “ನೂತನ ಆಯುಕ್ತರುಗಳು ಜನರ ನಡುವೆಯಿದ್ದು ಕೆಲಸ ಮಾಡಬೇಕು. ಜಿಬಿಎ ಆಯುಕ್ತರು ಫುಟ್ ಪಾತ್, ನೀರು, ರಸ್ತೆ ಸೇರಿದಂತೆ ಇತರೇ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ದಿನಕ್ಕೆ 17- 18 ಗಂಟೆ ಕೆಲಸ ಮಾಡಬೇಕಾಗುತ್ತದೆ. ಆದ ಕಾರಣಕ್ಕೆ ಹಿರಿಯ ಅಧಿಕಾರಿಗಳ ಜೊತೆ ಯುವ ಅಧಿಕಾರಿಗಳನ್ನೂ ನಿಯೋಜನೆ ಮಾಡಲಾಗಿದೆ” ಎಂದರು.

“ಮಹೇಶ್ವರ್ ರಾವ್ ಅವರು ಜಿಬಿಎಗೆ ಮುಖ್ಯ ಆಯುಕ್ತರಾಗಿ ಹಾಗೂ ಆಡಳಿತಾಧಿಕಾರಿಯಾಗಿ ಚುನಾವಣೆ ನಡೆಯುವವರೆಗೂ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಪ್ರಾಧಿಕಾರದ ಸಮಿತಿಗೆ 75 ಸದಸ್ಯರನ್ನು ನೇಮಕ ಮಾಡಲಾಗಿದೆ” ಎಂದು ತಿಳಿಸಿದರು.

ಉತ್ತಮ ಪದ ಸಿಕ್ಕರೆ ಹೆಸರು ಬದಲಾವಣೆ

ಗ್ರೇಟರ್ ಬೆಂಗಳೂರು ಎಂದು ಇಂಗ್ಲಿಷ್ ಹೆಸರಿಟ್ಟಿರುವ ಬಗ್ಗೆ ಶಾಸಕ ಅಶ್ವಥನಾರಾಯಣ ಅವರ ಆಕ್ಷೇಪದ ಬಗ್ಗೆ ಕೇಳಿದಾಗ, “ಅವರನ್ನೇ ಯಾವ ಹೆಸರು ಇಡಬೇಕು ಎಂದು ಸಲಹೆ ಕೇಳುತ್ತೇನೆ. ಮುಂಬೈ ಸೇರಿದಂತೆ ಬೇರೆ ಕಡೆಯು ಇದೇ ಪರಿಸ್ಥಿತಿ ಬಂದಿತ್ತು. ಮಾತೃಭಾಷೆಯನ್ನು ಕಡೆಗಣಿಸುವ ಮಾತಿಲ್ಲ. ಆದರೆ ಒಳ್ಳೆ ಪದ ಸಿಕ್ಕರೆ ಬದಲಾವಣೆ ಮಾಡೋಣ” ಎಂದರು.

“ಬೆಂಗಳೂರಿನ ಸಮಸ್ಯೆಗಳು ದಿನ ಬೆಳಗಾಗುವುದರಲ್ಲಿ ಬಗೆಹರಿಯುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ನಾವು ಬಗೆಹರಿಸುವ ವಿಶ್ವಾಸವಿದೆ. ಕುಡಿಯುವ ನೀರು, ರಸ್ತೆ ಗುಂಡಿ, ಸಂಚಾರ ದಟ್ಟಣೆ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡಲಾಗುವುದು” ಎಂದರು.

ಜಿಬಿಎಯಿಂದ ಬೆಂಗಳೂರು ಅಭಿವೃದ್ಧಿ ಸಾಧ್ಯವೇ ಎಂದು ಕೇಳಿದಾಗ, “ಖಂಡಿತವಾಗಿಯೂ ಸಾಧ್ಯವಾಗಲಿದೆ. ಸಾರ್ವಜನಿಕರು ಸಹ ಪಾಲಿಕೆಗಳ ಜೊತೆ ಕೈ ಜೋಡಿಸಬೇಕು. ಆಗ ಮಾತ್ರ ಪಾರದರ್ಶಕ ಆಡಳಿತ ನಡೆಸಲು ಸಾಧ್ಯವಾಗುತ್ತದೆ. ಜನರು ಪ್ರಾಮಾಣಿಕವಾಗಿ ತಮ್ಮ ಆಸ್ತಿಗಳನ್ನು ಘೋಷಣೆ ಮಾಡಿಕೊಳ್ಳಬೇಕು, ತೆರಿಗೆ ಪಾವತಿ ಮಾಡಬೇಕು” ಎಂದರು.

ಜಿಬಿಎಯ ಕಾರ್ಯನಿರ್ವಹಣೆ ಏನೆಂದು ಕೇಳಿದಾಗ, “ಬಿಬಿಎ ಕೇವಲ ಉಸ್ತುವಾರಿ ನೋಡಿಕೊಳ್ಳುತ್ತದೆ. ಮಿಕ್ಕ ಎಲ್ಲಾ ಸಂಗತಿಗಳು ಪಾಲಿಕೆಗಳ ವ್ಯಾಪ್ತಿಗೆ ಬರಲಿದೆ” ಎಂದು ತಿಳಿಸಿದರು.

ಈ ವೇಳೆ ಬಿಡಿಎ ಅಧ್ಯಕ್ಷರಾದ ಎನ್.ಎ ಹ್ಯಾರೀಸ್, ಶಾಸಕರಾದ ರವಿ ಸುಬ್ರಮಣ್ಯ, ಉದಯ್ ಗರುಡಾಚಾರ್, ಎಸ್.ಟಿ ಸೋಮಶೇಖರ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿ ನಾಥ್, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಪ್ರೀತಿ ಗೆಹ್ಲೋಟ್, ನಗರ ಪಾಲಿಕೆಗಳ ಆಯುಕ್ತರುಗಳಾದ ರಮೇಶ್ ಡಿ.ಎಸ್, ಕೆ.ಎನ್ ರಮೇಶ್, ಪೊಮ್ಮಲ ಸುನೀಲ್ ಕುಮಾರ್, ರಾಜೇಂದ್ರ ಕೆ.ವಿ, ಅಪರ ಆಯುಕ್ತರು (ಅಭಿವೃದ್ಧಿ) ಆದ ಲತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರಿನ ಹೊಸ ಅಧ್ಯಾಯ!

ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ನಾಮಫಲಕವನ್ನು ಇಂದು ಜಿಬಿಎ ಕೇಂದ್ರ ಕಚೇರಿಯಲ್ಲಿ ಅನಾವರಣಗೊಳಿಸಿದೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿರುವ ನಮಗೆಲ್ಲರಿಗೆ ತಾಯಿ ಭುವನೇಶ್ವರಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.

ಬೆಂಗಳೂರಿನ ಸಮಗ್ರ ಅಭಿವೃದ್ಧಿಯೇ… pic.twitter.com/ZuyAB4tuTH

— DK Shivakumar (@DKShivakumar) September 3, 2025

BREAKING: Rs. 300 crore grant for 5 new corporations under `GBA’: DCM D.K. Shivakumar announces
Share. Facebook Twitter LinkedIn WhatsApp Email

Related Posts

BREAKING : ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಉದ್ಯಮಿಗೆ 15 ಕೋಟಿ ವಂಚನೆ : ಬೆಳಗಾವಿಯಲ್ಲಿ ಇಬ್ಬರು ಸೈಬರ್ ವಂಚಕರು ಅರೆಸ್ಟ್!

11/04/2026 1:04 PM1 Min Read

BREAKING : ಕಲಬುರ್ಗಿಯಲ್ಲಿ IPL ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ವ್ಯಕ್ತಿ, ಡ್ಯಾಮ್‌ಗೆ ಹಾರಿ ಆತ್ಮಹತ್ಯೆ!

11/04/2026 12:53 PM1 Min Read

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

11/04/2026 12:47 PM2 Mins Read
Recent News

BREAKING : ಇಸ್ಲಾಮಾಬಾದ್‌ನಲ್ಲಿ ಇರಾನ್-ಅಮೆರಿಕ ಶಾಂತಿ ಮಾತುಕತೆ: ಇಸ್ರೇಲ್ ಮಾಧ್ಯಮಗಳಿಗೆ ಪಾಕಿಸ್ತಾನ ನಿಷೇಧ

11/04/2026 1:06 PM

BREAKING : ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಉದ್ಯಮಿಗೆ 15 ಕೋಟಿ ವಂಚನೆ : ಬೆಳಗಾವಿಯಲ್ಲಿ ಇಬ್ಬರು ಸೈಬರ್ ವಂಚಕರು ಅರೆಸ್ಟ್!

11/04/2026 1:04 PM

BREAKING : ಕಲಬುರ್ಗಿಯಲ್ಲಿ IPL ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ವ್ಯಕ್ತಿ, ಡ್ಯಾಮ್‌ಗೆ ಹಾರಿ ಆತ್ಮಹತ್ಯೆ!

11/04/2026 12:53 PM

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

11/04/2026 12:47 PM
State News
KARNATAKA

BREAKING : ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಉದ್ಯಮಿಗೆ 15 ಕೋಟಿ ವಂಚನೆ : ಬೆಳಗಾವಿಯಲ್ಲಿ ಇಬ್ಬರು ಸೈಬರ್ ವಂಚಕರು ಅರೆಸ್ಟ್!

By kannadanewsnow0511/04/2026 1:04 PM KARNATAKA 1 Min Read

ಬೆಳಗಾವಿ : ರಾಜ್ಯದಲ್ಲಿ ಇತ್ತೀಚಿಗೆ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಇದೀಗ ಬೆಳಗಾವಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 15…

BREAKING : ಕಲಬುರ್ಗಿಯಲ್ಲಿ IPL ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ವ್ಯಕ್ತಿ, ಡ್ಯಾಮ್‌ಗೆ ಹಾರಿ ಆತ್ಮಹತ್ಯೆ!

11/04/2026 12:53 PM

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

11/04/2026 12:47 PM

SHOCKING : ರಾಜ್ಯದಲ್ಲಿ `IPL’ ಬೆಟ್ಟಿಂಗ್ ಗೆ ಮತ್ತೊಂದು ಬಲಿ : ಸಾಲಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ.!

11/04/2026 12:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.