ನಾಗ್ಪುರ : ಜನನ ಪ್ರಮಾಣ 2.1 ಕ್ಕಿಂತ ಕಡಿಮೆಯಾದರೆ ಸಮಾಜದ ಅಳಿವು ಸಂಭವಿಸಬಹುದು. ಹಾಗಾಗಿ ಪ್ರತಿಯೊಬ್ಬ ದಂಪತಿಗಳು ಮೂರು ಮಕ್ಕಳನ್ನು ಹೆರಬೇಕು ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದು ಇದೀಗ ಭಾರಿ ವೈರಲ್ ಆಗಿದೆ.
ನಾಗ್ಪುರದಲ್ಲಿ ನಡೆದ ‘ಕಥಲೆ ಕುಲ್ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ಸಮಾಜದ ಜನಸಂಖ್ಯೆಯು 2.1 ಕ್ಕಿಂತ ಕಡಿಮೆಯಾದರೆ, ಆ ಸಮಾಜವು ಭೂಮಿಯಿಂದ ಕಣ್ಮರೆಯಾಗುತ್ತದೆ ಎಂದು ಆಧುನಿಕ ಜನಸಂಖ್ಯಾ ವಿಜ್ಞಾನವೇ ಹೇಳುತ್ತದೆ. ಈಗಾಗಲೇ ಈ ರೀತಿಯಲ್ಲಿ ಅನೇಕ ಭಾಷೆಗಳು ಮತ್ತು ಸಮಾಜಗಳು ಅಸ್ತಿತ್ವವನ್ನು ಕಳೆದುಕೊಂಡಿವೆ. ಹಾಗಾಗಿ ಜನಸಂಖ್ಯೆಯು 2.1 ಕ್ಕಿಂತ ಕಡಿಮೆ ಇರಬಾರದು ಎಂದು ಹೇಳಿದ್ದಾರೆ.
ಅನೇಕ ಬಿಜೆಪಿ ನಾಯಕರು ಜನಸಂಖ್ಯಾ ನಿಯಂತ್ರಣದ ಬಗ್ಗೆ ಧ್ವನಿ ಎತ್ತಿರುವ ಸಮಯದಲ್ಲೇ ಮೋಹನ್ ಭಾಗವತ್ ಅವರು ಈ ಹೇಳಿಕೆ ನೀಡಿದ್ದು, ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಕೆಲವು ತಿಂಗಳ ಹಿಂದೆ ರಾಜಸ್ಥಾನದ ಬಿಜೆಪಿ ಶಾಸಕ ಬಾಲ್ಮುಕುಂಡಾಚಾರ್ಯ ಜನಸಂಖ್ಯಾ ನಿಯಂತ್ರಣ ಮಸೂದೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದೀಗ ಮೋಹನ್ ಭಾಗವತ್ ಅವರು ಜನನ ಪ್ರಮಾಣ ಕುಸಿಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.