ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಕಾನೂನು ಹೋರಾಟ ಆರಂಭಿಸಲಿದ್ದು, ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಪೀಠಕ್ಕೆ ಸಿಎಂ ಪರ ವಕೀಲ ರವಿವರ್ಮ ಕುಮಾರ್ ಮೆಮೋ ಸಲ್ಲಿಸಿದ್ದಾರೆ.
ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಂಡಿದ್ದಾರೆ. ಅನುಮತಿಗೂ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ರಿಟ್ ಅರ್ಜಿಯಲ್ಲಿ ತಿಳಿಸಲಾಗಿದೆ.
ಖಾಸಗಿ ದೂರಿನ ಆಧಾರದ ಮೇಲೆ ಗೌರ್ನರ್ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್ 17-ಎ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 218ರಡಿ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿರುವುದರಿಂದ ರದ್ದುಪಡಿಸುವಂತೆ ಸಿಎಂ ಪರ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ.
ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದುಪಡಿಸುವ ಕುರಿತು ಇಂದೇ ತುರ್ತು ವಿಚಾರಣೆ ನಡೆಸುವಂತೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮಾಕುಮಾರ್ ವಾದ ಮಂಡಿಸಿದ್ದಾರೆ. ಜೊತೆಗೆ ನ್ಯಾ. ನಾಗಪ್ರಸನ್ನ ಪೀಠಕ್ಕೂ ಮೆಮೋ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೂನೂನು ಹೋರಾಟಕ್ಕೆ ಮುಂ