ಬೆಂಗಳೂರು: ಬೆಂಗಳೂರು: ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ ನೀಡಬೇಕು ಎಂದು ಮನವಿ ಮಾಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಲು ಒತ್ತಾಯಿಸಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕೈಬಿಡಲು ಆಗ್ರಹಿಸಿ ರಾಜಭವನ ಚಲೋ ನಡೆಸಲಿದ್ದು, ಕಾಂಗ್ರೆಸ್ ಪಕ್ಷದ ಎಲ್ಲಾ ಸಂಸದರು, ಸಚಿವರು, ಶಾಸಕರು ಕೂಡ ಭಾಗಿಯಾಗಿದ್ದಾರೆ.
#WATCH | Bengaluru: Karnataka CM Siddaramaiah, Deputy CM DK Shivakumar, other ministers of the State cabinet as well as Congress MLAs conduct 'Raj Bhavan Chalo', in protest against Governor Thaawarchand Gehlot. pic.twitter.com/Y0HYp0t0Ec
— ANI (@ANI) August 31, 2024
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಸಚಿವ ಸಂಪುಟದ ಇತರ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ‘ರಾಜಭವನ ಚಲೋ’ ನಡೆಸುತ್ತಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ.