Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸ್ಯಾಂಡಲ್ ವುಡ್ ನ ಜನಪ್ರಿಯ ಹಾಸ್ಯನಟ `ಉಮೇಶ್’ ವಿಧಿವಶ | Actor Umesh is no more
KARNATAKA

BREAKING : ಸ್ಯಾಂಡಲ್ ವುಡ್ ನ ಜನಪ್ರಿಯ ಹಾಸ್ಯನಟ `ಉಮೇಶ್’ ವಿಧಿವಶ | Actor Umesh is no more

By kannadanewsnow57

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಹಿರಯ ನಟ ಉಮೇಶ‍ (80) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ಉಮೇಶ್ ಅವರನ್ನು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಆರು ದಶಕಗಳ ಕಾಲ ವೃತ್ತಿಜೀವನವನ್ನು ಹೊಂದಿರುವ ಕನ್ನಡ ಸಿನಿಮಾ ನಟರಾಗಿದ್ದಾರೆ. ಅವರು 350 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಉಮೇಶ್ ತಮ್ಮ ವಿಶಿಷ್ಟ ಸಂಭಾಷಣೆ, ಮುಖಭಾವ ಮತ್ತು ಹಾಸ್ಯ ಸಮಯಪ್ರಜ್ಞೆಗೆ ಹೆಸರುವಾಸಿಯಾಗಿದ್ದಾರೆ.1990 ರಲ್ಲಿ ಬಿಡುಗಡೆಯಾದ ಅನಂತ್ ನಾಗ್ ನಟಿಸಿದ ಗೋಲ್ಮಾಲ್ ರಾಧಾಕೃಷ್ಣ ಹಾಸ್ಯ ಚಿತ್ರದಲ್ಲಿ ಉಮೇಶ್ ಅವರ “ಸೀತಾಪತಿ” ಪಾತ್ರವು ಕನ್ನಡ ಚಿತ್ರರಂಗದ ಅತ್ಯುತ್ತಮ ಹಾಸ್ಯ ಪಾತ್ರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಅವರ “ಅಪಾರ್ಥ ಮಾಡ್ಕೊಂಡ್ಬಿಟ್ರೋ ಎನೋ” ಡೈಲಾಗ್ ಜನಸಾಮಾನ್ಯರಲ್ಲಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ.

ಉಮೇಶ್ ಏಪ್ರಿಲ್ 22, 1945 ರ ವರ್ಷದಂದು ಮೈಸೂರಿನಲ್ಲಿ ಜನಿಸಿದರು. ಅವರ ತಂದೆ ಎ.ಎಲ್. ಶ್ರೀಕಂಠಯ್ಯ, ತಾಯಿ ನಂಜಮ್ಮ. ತೊಟ್ಟಿಲು ಕೂಸಾಗಿದ್ದಾಗಲೇ ರಂಗಪ್ರವೇಶಿಸಿದ್ದರಿಂದ ರಂಗಭೂಮಿಯತ್ತ ಒಲವು ಅವರಿಗೆ ಹುಟ್ಟಿನಿಂದಲೇ ಬಂತು. ಬಾಲ ಪಾತ್ರಗಳಲ್ಲಿ ತನ್ಮಯತೆಯಿಂದ ಅಭಿನಯಿಸಿದವರು ಉಮೇಶ್. ದೃಶ್ಯಕ್ಕೆ ತಕ್ಕಂತೆ ಮೂಡ್ ಬರಿಸಲು ಕಲ್ಲು ಸಕ್ಕರೆ ಆಸೆ ತೋರಿಸಿ ಬಾಲಪಾತ್ರಗಳಲ್ಲಿ ಅವರಿಗೆ ಅಭಿನಯಿಸಲು ಪ್ರಚೋದನೆ ನೀಡಲಾಗುತ್ತಿತ್ತಂತೆ.

ಕೆ. ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ ಅ.ನ.ಕೃ. ರವರು ಬರೆದ ಜಗಜ್ಯೋತಿ ಬಸವೇಶ್ವರ ನಾಟಕದಲ್ಲಿ ಬಿಜ್ಜಳನ ಮಗನ ಪಾತ್ರ ಉಮೇಶ್ ಅವರಿಗೆ ಬುದ್ಧಿ ಬಂದ ನಂತರದ ಮೊದಲ ಅನುಭವದ ಪಾತ್ರ. ಇದಕ್ಕೆ ಮೊದಲೇ ಅವರು ಹಲವಾರು ನಾಟಕಗಳಲ್ಲಿ ಬಾಲನಟನ ಪಾತ್ರವಹಿಸಿದ್ದರು. ಗುಬ್ಬಿ ವೀರಣ್ಣನವರ ಕಂಪನಿಯಲ್ಲೂ ಅವರಿಗೆ ಬಾಲನಟನ ಪಾತ್ರಗಳು ದೊರಕಿದವು. ದಶಾವತಾರ ನಾಟಕದಲ್ಲಿ ಇವರ ಪ್ರಹ್ಲಾದನ ಪಾತ್ರದ ಅಭಿನಯವನ್ನು ಮೆಚ್ಚಿದ ಮಾಸ್ತಿಯವರು ಹತ್ತು ರೂಪಾಯಿ ಸಂಭಾವನೆ ನೀಡಿದ್ದರು. ಗುಬ್ಬಿ ವೀರಣ್ಣನವರು ಇವರು ಬಾಲ್ಯದಲ್ಲಿದ್ದಾಗ ರಂಗ ಶಿಕ್ಷಣ ಕೊಡುತ್ತ ಅಭಿನಯವನ್ನು ಕಲಿಸಿದ ಗುರುಗಳು.

ಮಕ್ಕಳರಾಜ್ಯ’ದಲ್ಲಿ ೧೯೫೯ರಲ್ಲಿ ಅಭಿನಯಿಸಿದ್ದ ಇವರ ಚಂದ್ರಹಾಸನ ಪಾತ್ರ ಪಡೆದ ಜನಮೆಚ್ಚುಗೆಯಿಂದ ಬಿ. ಆರ್.ಪಂತುಲು ಅವರ ‘ಮಕ್ಕಳ ರಾಜ್ಯ’ ಚಲನ ಚಿತ್ರಕ್ಕಾಗಿ ಪ್ರಧಾನ ಪಾತ್ರಕ್ಕೆ ಆಯ್ಕೆಯಾದರು. ಇವರನ್ನು ಹೀಗೆ ಆಯ್ಕೆಮಾಡಿದ್ದವರು ಅಂದಿನ ದಿನದಲ್ಲಿ ಪಂತುಲು ಅವರ ಸಹಾಯಕರಾಗಿದ್ದ ಎಸ್. ಆರ್ ಪುಟ್ಟಣ್ಣ ಕಣಗಾಲರು. ಈ ಮಧ್ಯೆ ನಾಟಕಕಾರ ಎಚ್.ಕೆ. ಯೋಗಣ್ಣವರ ಉದಯ ಕಲಾ ನಾಟಕ ಮಂಡಲಿಯಲ್ಲಿ ಇವರು ಕೆಲ ಕಾಲ ನಟನಾ ವೃತ್ತಿಯಲ್ಲಿದ್ದರು.

ಮುಂದೆ1974ರಲ್ಲಿ ಉಮೇಶ್, ಪುಟ್ಟಣ್ಣ ಕಣಗಾಲರ ‘ಕಥಾ ಸಂಗಮ’ ಚಲನ ಚಿತ್ರದ ತಿಮ್ಮರಾಯಿ ಪಾತ್ರಕ್ಕಾಗಿ ಉಮೇಶ್ ಆಯ್ಕೆಯಾದರು. ಇದಾದ ನಂತರ ಅವರ ಚಿತ್ರರಂಗದ ನಂಟು ಬೆಳೆಯುತ್ತಾ ಬಂದಿತು. ಗೋಲ್ ಮಾಲ್ ರಾಧಾಕೃಷ್ಣ, ಗುರು ಶಿಷ್ಯರು ಮುಂತಾದ ಚಿತ್ರಗಳಿಂದ ಇತ್ತೀಚಿನ ವೆಂಕಟ ಇನ್ ಸಂಕಟವರೆಗಿನ ಅವರ ಪಾತ್ರಗಳನ್ನು ಮೆಚ್ಚದಿರುವವರೇ ಇಲ್ಲ.

BREAKING: Sandalwood's popular comedian `Umesh' passes away | Actor Umesh is no more
Share. Facebook Twitter LinkedIn WhatsApp Email

Related Posts

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

2 Mins Read

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

2 Mins Read

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

2 Mins Read
Recent News

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

State News
KARNATAKA

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು ಮೊದಲ ದಿನವೇ ಆಡಳಿತದಲ್ಲಿ ಮುನ್ನುಗ್ಗಿದ್ದಾರೆ. ಇಂದು ನಡೆದ…

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.