ಬೆಂಗಳೂರು: ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬಾರದಂತ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ನೀಡಲಾಗಿದೆ.
ಫಿಲ್ಮ್ ಚೇಂಬರ್ ಗೆ ತೆರಳಿದಂತ ಸಂಜು ವೆಡ್ಸ್ ಗೀತಾ-2 ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿಯವರು ನಟಿ ರಚಿತಾ ರಾಮ್ ವಿರುದ್ಧ ದೂರು ನೀಡಿದ್ದಾರೆ.
ಸಂಚು ವೆಡ್ಸ್ ಗೀತಾ-2 ಚಿತ್ರದ ಪ್ರಚಾರ ಕಾರ್ಯವನ್ನು ಮಾಡಲಾಗುತ್ತಿದೆ. ಆದರೇ ನಟಿ ರಚಿತಾ ರಾಮ್ ಮಾತ್ರ ಪ್ರಚಾರಕ್ಕೆ ಬರುತ್ತಿಲ್ಲ. ಹೀಗಾಗಿ ನಾವು ಇಂಥ ಕಲಾವಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಹಕಾರ ಕೊಟ್ಟಿಲ್ಲ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಪ್ರಮುಖ ಪಾತ್ರಗಳಲ್ಲಿನಟಿಸಿದ್ದಾರೆ , ಚೇತನ್ ಚಂದ್ರ ಮತ್ತು ರಾಗಿಣಿ ದ್ವಿವೇದಿ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಛಲವಾದಿ ಕುಮಾರ್ ನಿರ್ಮಿಸಿರುವ ಈ ಚಿತ್ರದ ಸಂಗೀತವನ್ನು ಶ್ರೀಧರ್ ವಿ. ಸಂಭ್ರಮ್ ಸಂಯೋಜಿಸಿದ್ದಾರೆ ಮತ್ತು ಛಾಯಾಗ್ರಹಣ ಸತ್ಯ ಹೆಗ್ಡೆ ನಿರ್ವಹಿಸಿದ್ದಾರೆ .