ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಳಿಕ ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯನ್ನು ಅತ್ಯಾಚಾರವೆಸಗಿ, ಬಳಿಕ ನೇಣು ಬಿಗಿದುಕೊಂಡು ಆರೋಪಿ ದೇವರಾಜು (50) ಆತ್ಮಹತ್ಯೆಗೆ ಶರಣಾಗಿದ್ದಾನೆ.
ದೇವರಾಜು ಮನೆಗೆಲಸ ಮಾಡುತ್ತಿದ್ದ 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








