ತುಮಕೂರು : ಮುಂಬರುವ ಆಗಸ್ಟ್ ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆಏನ್ ರಾಜಣ್ಣ ಹೇಳಿಕೆ ನೀಡಿದರು. ಅದರ ಬೆನ್ನಲ್ಲೇ ಇದೀಗ ಪಿಡಬ್ಲ್ಯೂಡಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷರಾಗಬಹುದು ಎಂದು ಸ್ಪೋಟಕವಾದ ಹೇಳಿಕೆ ನೀಡಿದರು.
ಮಾಧ್ಯಮಗಳೊಂದಿಗೆ ಸಚಿವ ಕೆ ಎನ್ ರಾಜಣ್ಣ ಮಾತನಾಡಿ, ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಆಗಬಹುದು. ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಆಗುತ್ತದೆ ಬದಲಾವಣೆ ಯಾವಾಗ ಅಂತ ಹೈಕಮಾಂಡ್ ನಿರ್ಧರಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕೆ.ಎನ್ ರಾಜಣ್ಣ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.
ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ವಿಚಾರವಾಗಿ, ಡಿಕೆ ಶಿವಕುಮಾರ್ ಸಿಎಂ ಆದರು ಆಗಲಿ ಪಿಎಂ ಆದರು ಆಗಲಿ. ಡಿಕೆ ಶಿವಕುಮಾರ್ ಸಿಎಂ ಆಗೋದು ಹೈಕಮಾಂಡ್ ಅವರಿಗೆ ಬಿಟ್ಟ ವಿಚಾರ. ಯಾರಿಗೆ ಯಾವ ಸ್ಥಾನ ಕೊಡುತ್ತಾರೋ ಎಲ್ಲವೂ ಕೂಡ ಹೈಕಮಾಂಡ್ ಅವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು.