ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಪಿಡಬ್ಲ್ಯೂಡಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿ ಮಾಡಿದ್ದಾರೆ.
ಹೌದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಜಾರಕಿಹೊಳಿ ದೆಹಲಿಯಲ್ಲಿ ನಿನ್ನೆ ಭೇಟಿಯಾಗಿ ಚರ್ಚಿಸಿದ್ದಾರೆ. ಭೇಟಿಯ ವೇಳೆ ಹಲವು ವಿಚಾರಗಳ ಕುರಿತಂತೆ ಖರ್ಗೆ ಜೊತೆ ಜಾರಕಿಹೊಳಿ ಚರ್ಚಿಸಿದ್ದಾರೆ.
ಹಾಗಾಗಿ ರಾಜ್ಯ ರಾಜಕೀಯದಲ್ಲಿ ಈ ಒಂದು ಭೇಟಿ ತೀವ್ರ ಕುತೂಹಲ ಮೂಡಿಸಿದೆ.ಅಲ್ಲದೆ ಮೊನ್ನೆಯಷ್ಟೇ ದಲಿತ ನಾಯಕರ ಜೊತೆ ಸತೀಶ್ ಜಾರಕಿಹೊಳಿ ಸಭೆ ಸೇರಿದ್ದರು. ಬೆಂಗಳೂರಿನಲ್ಲಿ ರಹಸ್ಯ ಸಭೆ ಮಾಡಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ಸತೀಶ್ ಜಾರಕಿಹೊಳಿ ಅವರ ಈ ಒಂದು ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.