ನವದೆಹಲಿ: ಯೂಟ್ಯೂಬರ್ ಮತ್ತು ಪಾಡ್ಕಾಸ್ಟರ್ ರಣವೀರ್ ಅಲ್ಲಾಬಾಡಿಯಾ, ‘ಇಂಡಿಯಾಸ್ ಗಾಟ್ ಲೇಟೆಂಟ್’ ಕಾರ್ಯಕ್ರಮದ ನಿರೂಪಕ ಸಮಯ್ ರೈನಾ ಮತ್ತು ಅಪೂರ್ವ ಮುಖಿಜಾ ಅವರನ್ನು ಮುಂದಿನ ಆದೇಶದವರೆಗೆ ಯಾವುದೇ ಕಾರ್ಯಕ್ರಮವನ್ನು ಪ್ರಸಾರ ಮಾಡದಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ಬಂಧಿಸಿದೆ.
ಹಾಸ್ಯನಟ ಸಮಯ್ ರೈನಾ ಅವರ ಯೂಟ್ಯೂಬ್ ಶೋ ‘ಇಂಡಿಯಾಸ್ ಗಾಟ್ ಲೇಟೆಂಟ್’ ನಲ್ಲಿ ‘ಪೋಷಕರ ಲೈಂಗಿಕತೆ’ ಹೇಳಿಕೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ತನ್ನ ವಿರುದ್ಧ ದಾಖಲಾದ ಎಫ್ಐಆರ್ಗಳನ್ನು ದಾಖಲಿಸುವಂತೆ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ