ನವದೆಹಲಿ : ಸಾಮಾಜಿಕ ಮತ್ತು ಜಾತಿಗಣತಿಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸರ್ಕಾರದ ನಿಯಮಗಳ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ತಿಳಿಸಿದೆ.
ಜಾತಿವಾರು ಜನಗಣತಿ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಾಮಾಜಿಕ ಮತ್ತು ಜಾತಿಗಣತಿಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಜನಸಂಖ್ಯೆಗೆ ಅನುಗುಣವಾಗಿ ಹಿಂದುಳಿದ ಮತ್ತು ಇತರ ಹಿಂದುಳಿದ ವರ್ಗಗಳ ಕಲ್ಯಾಣ ಕ್ರಮಗಳನ್ನು ಜಾರಿಗೆ ತರಲು ಸಾಮಾಜಿಕ-ಆರ್ಥಿಕ ಜಾತಿವಾರು ಜನಗಣತಿ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.