ನವದೆಹಲಿ : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ಸ್ಥಳೀಯ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಿಸಲು ಸಲ್ಲಿಸಿದ್ದ ಅರ್ಜಿಯನ್ನು ರದ್ದುಪಡಿಸಿದೆ.
ಸಾರ್ವಜನಿಕರೇ ಗಮನಿಸಿ: ಬೇಸಿಗೆ ಕಾಲದಲ್ಲಿ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಆರೋಗ್ಯ ಇಲಾಖೆಯ ಮಾರ್ಗಸೂಚಿ!
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ಹಾಗೂ ಹೈಕೋರ್ಟ್ ಧಾರವಾಡ ಪ್ರವೇಶವನ್ನು ನಿರಾಕರಿಸಿ ಆದೇಶ ನೀಡಿದವು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅವನೇ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ನ್ಯಾ. ಎಂ ತ್ರಿವೇದಿ ವಿಚಾರಣೆಯನ್ನು ನಡೆಸಿ ಪ್ರಕರಣವನ್ನು ಸ್ಥಳೀಯ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಸೂಚಿಸಿದೆ ಎಂದು ತಿಳಿದುಬಂದಿದೆ.
ಈ ವೇಳೆ ಆನೇಕಲ್ ಕರಣಿ ಪರವಾದ ಮಾಡಿದ ವಕೀಲರು ರಾಜಕೀಯ ದೃದ್ದೇಶದಿಂದ ಅವರನ್ನು ಹತ್ತಿಕ್ಕಲು ಯತ್ನಿಸಲಾಗುತ್ತಿದೆ ಎಂದುವಾದ ಮಂಡಿಸಿದರು.ವಾದ ಪ್ರತಿವಾದ ಆಲಿಸಿದ ನಂತರ ಕೊಲೆ ಪ್ರಕರಣದಂತಹ ಗಂಭೀರ ವಿಚಾರದಲ್ಲಿ ಜಾಮೀನಿನ ಮೇಲೆ ಹೊರಗಡೆ ಬಿಟ್ಟಿರುವುದೇ ದೊಡ್ಡ ವಿಚಾರ. ಈಗಾಗಲೇ ತೀರ್ಪಿನಲ್ಲಿರುವ ಹಲವು ಗೊಂದಲಗಳನ್ನು ತಿಳಿಗೊಳಿಸಲಾಗಿದೆ ಹಾಗಾಗಿ ಸ್ಥಳೀಯ ನ್ಯಾಯಾಲಯದಲ್ಲಿ ಪ್ರಕರಣವನ್ನು ಇತ್ಯರ್ಥ ಗೊಳಿಸಿ ಎಂದು ಸೂಚನೆ ನೀಡಿ ಅರ್ಜಿಯನ್ನು ವಜಾಗೊಳಿಸಿದೆ ಎಂದು ತಿಳಿದುಬಂದಿದೆ.