ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಇಡಿ 120 ಬಿ ಪ್ರಕರಣವನ್ನು ಇದೀಗ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಹಿಂದೆ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ ಇಡಿ ತನಿಕೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ನಿರಾಳವಾಗಿದ್ದಾರೆ.
2017ರಲ್ಲಿ ಡಿಕೆ ಶಿವಕುಮಾರ್ ಅವರ ಮನೆ ಹಾಗೂ ಬೆಂಬಲಿಗರ ಮೇಲೆ ಐಟಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಕೋಟ್ಯಂತರ ರೊಪಾಯಿ ಹೆಚ್ಚು ಅಕ್ರಮ ಹಣ ಸಿಕ್ಕಿದ್ದು, ಇದೆ ಪ್ರಕರಣವನ್ನು ಇಡಿ ಪ್ರಕರಣ ವರ್ಗಾಯಿಸಿಕೊಂಡು ಪ್ರಕರಣ ದಾಖಲಾಗಿತ್ತು. ಇದೆ ವೇಳೆ ಡಿಕೆ ಶಿವಕುಮಾರ್ ಅವರನ್ನು ವಿಚಾರಣೆ ಗೊಳಿಸಿ ಸುಮಾರು 14 ತಿಂಗಳು ಜೈಲು ವಾಸ ಕೂಡ ಅನುಭವಿಸಿದ್ದರು..
ಇದೀಗ ಇಡೀ ತಣಿಕೆಯಿಂದ ಅಡಿಸೆ ಬಿಡಿಕೆ ಶಿವಕುಮಾರ್ ನಿರಾಳವಾಗಿದ್ದು ನ್ಯಾ. ಸೂರ್ಯಕಾಂತ್ ನೇತೃತ್ವದ ಪೀಠದಿಂದ ಹೈಕೋರ್ಟ್ ಆದೇಶವನ್ನು ರದ್ದೂಗೋಳಿಸಿದೆ. ಡಿಕೆ ವಿರುದ್ಧ ಅಕ್ರಮಣ ವರ್ಗಾವಣೆ ಪ್ರಕಾರ ಸಂಬಂಧಿಸಿದಂತೆ ಇಡೀ 120 ಬಿ ಪ್ರಕರಣದ ಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು 74.93 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಅದರಂತೆ 2020ರ ಅಕ್ಟೋಬರ್ 5ರಂದು ದೆಹಲಿ, ಮುಂಬೈ ಸೇರಿದಂತೆ ಡಿಕೆ ಶಿವಕುಮಾರ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಸಿಬಿಐ ಏಕಕಾಲಕ್ಕೆ ದಾಳಿ ನಡೆಸಿತ್ತು.
ಈ ವೇಳೆ ಕಂಪ್ಯೂಟರ್ ಹಾರ್ಡ್ಡಿಸ್ಕ್ ಹಾಗೂ 57 ಲಕ್ಷ ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇನ್ನೊಂದೆಡೆ, ಜಾರಿ ನಿರ್ದೇಶನಾಲಯವು (ಇಡಿ) ಡಿಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿತ್ತು. ಈ ಸಂಬಂಧ ಡಿ.ಕೆ.ಶಿವಕುಮಾರ್ ಹಲವು ಬಾರಿ ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆ ಎದುರಿಸಿ ಜೈಲಿಗೆ ಹೋಗಿ ಜಾಮೀನು ಮೇಲೆ ಬಿಡುಗಡೆಯಾಗಿ ಹೊರಬಂದಿದ್ದರು.