ಚಿತ್ರದುರ್ಗ : ಫೋಕ್ಸೋ ಪ್ರಕರಣದಡಿ ಆರೋಪಿಯಾಗಿರುವ ಮುರುಘಾ ಶ್ರೀ ಕೈಗೆ ಮಠದ ಆಡಳಿತ ನೀಡಿದ್ದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಇಂದು ಮಧ್ಯಂತ ಆದೇಶ ನೀಡಿದ ಸುಪ್ರೀಂಕೋರ್ಟ್, ಮುರುಘಾಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿದೆ. ಅಲ್ಲದೆ, ಮುರುಘಾಮಠ ಹಾಗೂ ಎಸ್ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
BREAKING : ಮಾಜಿ ‘IPS’ ಅಧಿಕಾರಿ ‘ಅಣ್ಣಾಮಲೈಗೆ’ ಬಿಗ್ ರಿಲೀಫ್: ಕ್ರಿಮಿನಲ್ ಪ್ರಕರಣಕ್ಕೆ ತಡೆ ನೀಡಿದ ‘ಸುಪ್ರೀಂ’
ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀಗಳು ಮುರುಘಾಮಠ, ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಆಡಳಿತ ನಡೆಸುತ್ತಿದ್ದರು. ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಮಠದ ಆಡಳಿತಕ್ಕೆ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ಆದೇಶದಂತೆ ಸಮಿತಿ ರಚಿಸದೇ ಇದ್ದಲ್ಲಿ ಮೂರು ದಿನಗಳ ಒಳಗಾಗಿ ಸಮಿತಿ ರಚಿಸುವಂತೆ ಸೂಚಿಸಿದೆ.
ಹೈಕೋರ್ಟ್ ಆದೇಶದಂತೆ ಸಮಿತಿ ರಚಿಸುವಂತೆ ಸೂಚನೆ ನೀಡಿದೆ. ಸಮಿತಿ ಮೂಲಕ ಮಠದ ಆಡಳಿತವನ್ನು ಸರ್ಕಾರ ನೋಡಿಕೊಳ್ಳಬೇಕು.ಮೇಲ್ವಿಚಾಣಾ ಸಮಿತಿಯಲ್ಲಿ ಆರೋಪಿಗಳು ಇರದಂತೆ ನೋಡಿಕೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಕಳೆದ ವರ್ಷ ರಾಜ್ಯ ಸರ್ಕಾರವು ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿತ್ತು. ಆದರೆ ಈ ನೇಮಕವನ್ನು ಏಕಸದಸ್ಯ ಪೀಠ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅದರಂತೆ 2023 ಜುಲೈ 18 ರಂದು ಮೇಲ್ಮನವಿ ವಿಚಾರಣೆಗೆ ನಿರ್ಧಾರ ಮಾಡಿದ ಸಿಜೆ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ. ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ, ಮುಂದಿನ ಆದೇಶದವರೆಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಈ ಹಿಂದೆ ಆದೇಶ ಹೊರಡಿಸಿತ್ತು.