ನವದೆಹಲಿ: ಕೋಲ್ಕತಾ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಹೆಸರು, ಫೋಟೋಗಳು ಮತ್ತು ವೀಡಿಯೊ ತುಣುಕುಗಳಿಗೆ ಸಂಬಂಧಿಸಿದ ಎಲ್ಲಾ ಉಲ್ಲೇಖಗಳನ್ನ ಎಲ್ಲಾ ಸಾಮಾಜಿಕ ಮಾಧ್ಯಮ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಅತ್ಯಾಚಾರ ಸಂತ್ರಸ್ತೆಯ ಗುರುತನ್ನ ಬಹಿರಂಗಪಡಿಸುವುದು ಆಕೆಯ ಘನತೆಯ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿತು.
“ಮೃತರ ದೇಹದ ಚಿತ್ರಗಳು ಮತ್ತು ವೀಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಮೃತರ ಹೆಸರು, ಛಾಯಾಚಿತ್ರಗಳು ಮತ್ತು ವೀಡಿಯೊ ತುಣುಕುಗಳನ್ನು ತಕ್ಷಣವೇ ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕಬೇಕೆಂದು ನಾವು ನಿರ್ದೇಶಿಸುತ್ತೇವೆ” ಎಂದು ನ್ಯಾಯಮೂರ್ತಿಗಳಾದ ಜೆ.ಬಿ ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೂ ಒಳಗೊಂಡ ನ್ಯಾಯಪೀಠ ಹೇಳಿದೆ.
ಸಂತ್ರಸ್ತೆಯ ಗುರುತನ್ನ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸುವುದನ್ನು ಪ್ರಶ್ನಿಸಿ ವಕೀಲ ಕಿನ್ನೋರಿ ಘೋಷ್ ಮತ್ತು ಇತರರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
BREAKING : ‘UPSC’ಯಿಂದ ‘ಲ್ಯಾಟರಲ್ ಎಂಟ್ರಿ’ ನೇಮಕಾತಿ ಅಧಿಸೂಚನೆ ರದ್ದು