ಬೆಂಗಳೂರು : ಬ್ರೇಕ್ ಫೇಲ್ ಆಗಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ ಆಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಇಳಿಜಾರಿನಲ್ಲಿ ಏಕಾಏಕಿ ಶಾಲಾ ಬಸ್ಸಿನ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿದೆ.
ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮಕ್ಕಳನ್ನು ಬಸ್ ಪಿಕ್ ಮಾಡುತ್ತಿತ್ತು. ಈ ವೇಳೆ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಎಲ್ಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರಿ ವಿಭಾಗ ಠಾಣೆ ಪೊಲೀಸರು ಭೇಟಿ ಕೊಟ್ಟಿದ್ದಾರೆ.








