ವಿಜಯಪುರ : ಶಾಲೆಯ ಸ್ಟಾಕ್ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಾಲಾ ಹೆಡ್ ಮಾಸ್ಟರ್ ಶವ ಪತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ನಾಗೂರು ಎಂಬಲ್ಲಿ ನಡೆದಿದೆ.
ಹೌದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಸಿಎಸ್ ಹಡಪದ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಿ ಎಸ್ ಹಡಪದ ಅವರು ಎರಡು ವರ್ಷದಿಂದ ನಾಗೂರು ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸಿ ಎಸ್ ಹಡಪದ ಸಾವಿಗೆ ಇದೀಗ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಸದ್ಯ ನಾಗೂರು ಶಾಲೆಗೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಟಾಕ್ ರೂಮಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇದು ಆತ್ಮಹತ್ಯೆಯು ಅಥವಾ ಕೊಲೆಯೂ ಎಂಬುವುದರ ಕುರಿತು ಪೊಲೀಸರ ತನಿಖೆಯ ಬಳಿಕ ತಿಳಿದುಬರಲಿದೆ.