ಪಂಜಾಬ್ : ಪಾಕಿಸ್ತಾನ ಭಾರತದ ಮಳೆ ಕ್ಷಿಪಣಿ ದಾಳಿ ನಡೆಸುತ್ತಿದೆ ಆದರೆ ಭಾರತ ಕೂಡ ಪಾಕಿಸ್ತಾನದ ಕ್ಷಿಪಣಿಗಳನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಭಾರತದ ಮೇಲೆ ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ನಲ್ಲಿ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹೌದು ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ರಾಜ್ಯದ ಶಾಲಾ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ.