ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಕೇಸ್ ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಡಿ ( E.D) ಅಧಿಕಾರಿಗಳು ನಗರದ ಹಲವು ಕಡೆ ದಾಳಿ ನಡೆಸಿದ್ದಾರೆ. ನಗರದ 18 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.