ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಆಳಂದ್ ಪಟ್ಟಣದಲ್ಲಿರುವ ಲಾಡ್ಲೆ ಮಾಶಾಕ್ ದರ್ಗಾದಲ್ಲಿರುವಂತಹ ರಾಘವ ಚೈತನ್ಯ ಶಿವಲಿಂಗ ಪೂಜೆಗಾಗಿ ನಿನ್ನೆ ಹಿಂದೂ ಸಂಘಟನೆಗಳು ಕಲಬುರ್ಗಿ ಹೈಕೋರ್ಟಿಗೆ ಅನುಮತಿ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದವು.ನಿನ್ನೆ ಹೈಕೋರ್ಟ್ ಪೀಠ ಹಲವು ಷರತ್ತುಗಳನ್ನು ವಿಧಿಸಿ ಶಿವಲಿಂಗ ಪೂಜೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇದೀಗ ಆಳಂದ್ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ 144 ಜಾರಿ ಮಾಡಲಾಗಿದೆ.
ಹೌದು ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ಶ್ರೀರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಹಿಂದೂಗಳಿಗೆ ಹೈಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಇಂದಿನ ಮಹಾ ಶಿವರಾತ್ರಿಯ ದಿನದಂದು ಶಿವಲಿಂಕಕ್ಕೆ ವಿಶೇಷ ಪೂಜೆ ಸಲ್ಲಿಸಲು ಶಿವಭಕ್ತರು ಮುಂದಾಗಿದ್ದಾರೆ.
ಹೀಗಾಗಿ ಶಿವಲಿಂಗೆಕ್ಕೆ ವಿಶೇಷ ಪೂಜೆ ಸಲ್ಲಿಸಲು ಹಿಂದೂಪರ ಸಂಘಟನೆಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸದ್ಯ ಕಲಬುರಗಿಯ ಆಳಂದ ಪಟ್ಟಣದಲ್ಲಿ 144 ಅನ್ವಯ ನಿಷೇದಾಜ್ಞೆ ಜಾರಿ ಮಾಡಲಾಗಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಇಂದು ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆಯವರೆಗೆ ಶಿವಲಿಂಗ ಪೂಜೆಗೆ ಅವಕಾಶ ಇದೆ.