ಬೆಂಗಳೂರು : ಬೆಂಗಳೂರಿನಲ್ಲಿ ಕಾರ್ಖಾನೆಯಲ್ಲಿ ಕಳ್ಳತನಕ್ಕೆ ಬಂದಿದ್ದ ಕಳ್ಳನ ಮೇಲೆ ಸೆಕ್ಯೂರಿಟಿ ಗಾರ್ಡ್ ಫೈರಿಂಗ್ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸದರನ್ ಕಾರ್ಖಾನೆಯಲ್ಲಿ ಕಳ್ಳತನಕ್ಕೆ ಬಂದಿದ್ದ ಕಳ್ಳನ ಮೇಲೆ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಸುರೇಶ್ ಅವರು ಫೈರಿಂಗ್ ಮಾಡಿದ್ದಾರೆ.
ತಡರಾತ್ರಿ 2.30 ರ ಸುಮಾರಿಗೆ ಕಾರ್ಖಾನೆಗೆ ನುಗ್ಗಿ ತಾಮ್ರ, ಬ್ಯಾಟರಿ ಕದಿಯಲು ಕಳ್ಳ ಯತ್ನಿಸಿದ್ದಾನೆ. ಈ ವೇಳೆ ಸೆಕ್ಯೂರಿಟ ಗಾರ್ಡ್ ಎಚ್ಚರಿಕೆ ನೀಡಿದ್ದಾರೆ. ಆದರೆ ಕಳ್ಳ ಕದ್ದ ಮಾಲ್ ಜೊತೆಗೆ ಎಸ್ಕೇಪ್ ಆಗುವಾಗ ಸುರೇಶ್ ಕಳ್ಳನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.