ದಾವಣಗೆರೆ : ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ತಕ್ಷಣ ಅವರನ್ನು ದಾವಣಗೆರೆಯ ಎಸ್ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ ಅವರಿಗೆ ಇದೀಗ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ನಗರದ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಾಮನೂರು ಶಿವಶಂಕರಪ್ಪ ಅವರಿಗೆ ಹೃದಯ ಸಂಬಂಧಿ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಹಿಂದುರಿಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.