ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ದರ್ಶನ್ ಕೇಸ್ನಿಂದ ಹಿರಿಯ ವಕೀಲ ಕಪಿಲ್ ಸಿಬಲ್ ಹಿಂದೆ ಸರಿದಿದ್ದಾರೆ.
ಇಂದು ಸುಪ್ರೀಂ ಕೋರ್ಟ್ಗೆ ದರ್ಶನ್ ಪರ ವಾದ ಮಂಡಿಸಲು ಅವರು ಹಾಜರಾಗಬೇಕಿತ್ತು ಆದರೆ ಗೈರಾಗಿದ್ದರು, ದರ್ಶನ್ ಪರ ವಕೀಲ ಸಿದ್ಧಾರ್ಥ ದವೆ ಹಾಜರಾಗಿದ್ದರು. ಕಪಿಲ್ ಸಿಬಲ್ ಅವರು ಗೈರಾಗಿದ್ದರಿಂದ, ಕೇಸ್ ಬಗ್ಗೆ ಅಧ್ಯಯನ ಮಾಡಲು ಸ್ವಲ್ಪ ಕಾಲವಕಾಶವನ್ನು ಸಿದ್ಧಾರ್ಥ ದವೆ ಕೇಳಿದ್ದಾರೆ.
ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಡಿಸೆಂಬರ್ ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ , ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದೆ. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 24ಕ್ಕೆ ವಿಚಾರಣೆ ಮುಂದೂಡಿದರು.
ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂ ಕೋರ್ಟ್ ಜುಲೈ 24 ಅಂದರೆ ಗುರುವಾರಕ್ಕೆ ಅರ್ಜಿ ವಿಚಾರಣೆ ಮುಂದೂದೆ ಕಪಿಲ್ ಸಿಬಲ್ ಇಂದು ವಾದ ಮಂಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಿನ್ನೆ ರಾತ್ರಿ ಈ ಕೇಸ್ ನನಗೆ ಬಂದಿದೆ.ಬೇರೊಂದು ಕೋರ್ಟ್ ನಲ್ಲಿ ಕಪಿಲ್ ಸಿಬಲ್ ಬ್ಯುಸಿಯಾಗಿದ್ದಾರೆ. ಒಂದು ದಿನ ಕಾಲಾವಕಾಶ ನೀಡುವಂತೆ ಎಂದು ದರ್ಶನ್ ಪರ ಹೊಸ ವಕೀಲ ಸಿದ್ಧಾರ್ಥ ದವೆ ಮನವಿ ಮಾಡಿದರು. ಹಾಗಾಗಿ ಸುಪ್ರೀಂ ಕೋರ್ಟ್ ಜಡ್ಜ್ ಈ ಒಂದು ಅರ್ಜೆಯ ವಿಚಾರಣೆಯನ್ನು ಜುಲೈ 24ಕ್ಕೆ ಮಂದೂಡಿ ಆದೇಶ ಹೊರಡಿಸಿದರು.