ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬ್ರಹನ್ಮಠದ ಹಿರಿಯ ಶ್ರೀ ಗುರುಸ್ವಾಮಿ (75) ಲಿಂಗೈಕ್ಯರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಸಂಜೆ 5 ಗಂಟಗೆ ಶ್ರೀಮಠದ ಆವರಣದಲ್ಲಿ ಸುತ್ತೂರು ಶ್ರೀಗಳು ಹಾಗೂ ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.