ಬೆಂಗಳೂರು : ಹಿರಿಯ ಸಾಹಿತಿ, ಸಂಶೋಧಕ ಡಾ.ಪಿ.ವಿ.ನಾರಾಯಣ (82) ಅವರು ವಯೋಸಹಜವಾದ ಅನಾರೋಗ್ಯ ಸಮಸ್ಯೆಯಿಂದ ನಿಧನ ಹೊಂದಿದ್ದಾರೆ.
ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಸಾಹಿತಿ ಪಿ. ವಿ. ನಾರಾಯಣ (82) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದು, ಜಯನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು. ಮಧ್ಯಾಹ್ನ 3 ಗಂಟೆಯ ಬಳಿಕ ಬನಶಂಕರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಡಾ.ಪಿ.ವಿ. ನಾರಾಯಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹಿರಿಯ ಸಾಹಿತಿ, ಸಂಶೋಧಕ ಡಾ.ಪಿ.ವಿ.ನಾರಾಯಣ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಗೆ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ನಾರಾಯಣ ಅವರ ನಿಧನ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ನಾರಾಯಣ ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.
ಹಿರಿಯ ಸಾಹಿತಿ, ಸಂಶೋಧಕ ಡಾ.ಪಿ.ವಿ.ನಾರಾಯಣ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಗೆ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ನಾರಾಯಣ ಅವರ ನಿಧನ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ನಾರಾಯಣ ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು. pic.twitter.com/eupVgpQdFc— Siddaramaiah (@siddaramaiah) April 3, 2025