ಬೆಂಗಳೂರು : ಕರಾವಳಿ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಕೋಮು ಗಲಭೆ ತಡೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಕೋಮು ಗಲಭೆ ನಿಯಂತ್ರಣ ಕ್ರಮವಾಗಿ ಡಿಐಜಿ, ಎಸ್ಪಿ ವರ್ಗಾವಣೆ ಮಾಡಿದ್ದು, ಆ ಸ್ಥಳಕ್ಕೆ ಹಿರಿಯ ಐಪಿಎಸ್ ಅಧಿಕಾರಿಗಳನ್ನು ನೇಮಿಸಿದೆ.
ಇಂದು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಅನುಪಮ್ ಅಗರವಾಲ್, ಐಪಿಎಸ್ (2008) ಮಂಗಳೂರು ನಗರದ ಉಪ ನಿರೀಕ್ಷಕ ಮತ್ತು ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಉಪ ನಿರೀಕ್ಷಕ ಜನರಲ್ ಆಫ್ ಪೊಲೀಸ್, ಆರ್ಥಿಕ ಅಪರಾಧಗಳು, ಅಪರಾಧ ತನಿಖಾ ಇಲಾಖೆ, ಸಿ. ವಂಶಿ ಕೃಷ್ಣ, ಐಪಿಎಸ್ ಅವರನ್ನು ಏಕಕಾಲೀನ ಆರೋಪದಿಂದ ಮುಕ್ತಗೊಳಿಸಲಾಗಿದೆ.
ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಆಗುತ್ತಿರುವುದರಿಂದ ರಾಜ್ಯ ಸರ್ಕಾರ ಇದೀಗ ಐಪಿಎಸ್ ಅಧಿಕಾರಿಗಳನ್ನು ದಿಢೀರನೇ ಎತ್ತಗಂಡಿ ಮಾಡಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ನಾಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವಾ ದಿನೇಶ್ ಗುಂಡೂರಾವ್ ಅವರು ಜಿಲ್ಲೆಗೆ ಭೇಟಿ ನೀಡಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.