ಬೆಂಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ ಖಂಡಿಸಿ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ರಾಜಭವನಕ್ಕೆ ಕನ್ನಡಪರ ಹೋರಾಟಗಾರರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ರಾಜಭವನಕ್ಕೆ ಮುತ್ತಿಗೆಗೆ ಯತ್ನಿಸಿದ್ದು, ಈ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿಯಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದರು. ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿಯೇ ಖಂಡಿಸಿದ್ದವು. ಈ ಬೆನ್ನಲ್ಲೇ ಇಂತಹ ಘಟನೆ ಖಂಡಿಸಿ ಮಾರ್ಚ್.22ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದಾವೆ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದೆ. ಅಲ್ಲದೇ ಕರ್ನಾಟಕದ ಬಸ್ ಗಳಿಗೆ ಮಸಿ ಕೂಡ ಬಳಿಯಲಾಗಿದೆ. ಈ ಎಲ್ಲವನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದಾವೆ. ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲಿನ ಹಲ್ಲೆ, ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ಖಂಡಿಸಿ ಮಾರ್ಚ್.22ರಂದು ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಘೋಷಿಸಿವೆ.