ಬೆಂಗಳೂರು: ಬೆಂಗಳೂರಿನಲ್ಲಿ 7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಎಸಗಿದ ಆರೋಪದ ಮೇಲೆ ಕೇರಳ ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿಬಂದಿದ್ದು, 7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿ ಚಿಪ್ಸ್ ಕೊಡಿಸುವುದಾಗಿ ಬಾಲಕಿಯನ್ನು ಕರೆದೊಯ್ದು ಗೋದಾಮಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಬಾಲಕಿ ಪೋಷಕರು ಬಾಗಲಗುಂಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಹಿನ್ನೆಲೆಯಲ್ಲಿ ಕೇರಳ ಮೂಲದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.