ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಇಂದು ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ನಿರ್ಧರಿಸಲಾಗಿದೆ.
ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರವನ್ನು ಇಂದು ಬೆಳಗ್ಗೆ 9 ಗಂಟೆಗೆ ಆಸ್ಪತ್ರೆಯಿಂದ ವೀರಶೈವ ಮಹಾಸಭಾ ಕಚೇರಿಗೆ ತರಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ 10.30ರವರೆಗೆ ಅಲ್ಲಿಯೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ, ಬಳಿಕ ಸಂಜೆ 4 ಗಂಟೆಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಇಂದು ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನೆರವೇರಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರು ಆಗಮಿಸಲಿದ್ದಾರೆ.
ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ಇಂದು ಎಲ್ಲಾ ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ.!
ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾದ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಇಂದು ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ.ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ.
ಶಾಮನೂರು ಶಿವಶಂಕರಪ್ಪನವರು ನಿಧನ ಹಿನ್ನೆಲೆ ಅವರ ಗೌರವಾರ್ಥವಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಡಿಸೆಂಬರ್ 15 ರಂದು ದಾವಣಗೆರೆ ಜಿಲ್ಲೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ ಡಿಸೆಂಬರ್ 27 ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಲು ಸೂಚಿಸಲಾಗಿದೆ.
Deeply saddened by the passing of Shri Shamanur Shivashankarappa ji. A steadfast Congressman, he dedicated decades of his life to public service with unwavering commitment.
His contributions to Karnataka and to the Congress are immense and will be remembered with respect.
My…
— Rahul Gandhi (@RahulGandhi) December 14, 2025








