ಬೆಂಗಳೂರು : ಇತ್ತೀಚಿಗೆ ನಯಾರ ಪೆಟ್ರೋಲ್ ಬಂಕ್ ಪೆಟ್ರೋಲ್ ಡಿಸೇಲ್ ದರ ಹೆಚ್ಚಳ ಮಾಡಿತ್ತು. ಅದರ ಬೆನ್ನಲ್ಲೆ, ಇದೀಗ ಪೆಟ್ರೋಲ್, ಡೀಸೆಲ್ ಕೊರತೆ ವದಂತಿ ಬೆನ್ನಲ್ಲೇ ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಜನತೆಗೆ ಮತ್ತೆ ಶಾಕ್ ಕೊಟ್ಟಿದೆ. ಕಳೆದ 15 ದಿನಗಳಲ್ಲಿ ಮೂರು ಬಾರಿ ದರ ಏರಿಕೆ ಮಾಡಿದ್ದ ಶೆಲ್ ಇದೀಗ ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದೆ.
ಪ್ರೀಮಿಯಂ ಜೊತೆಗೆ ಸಾಮಾನ್ಯ ಪೆಟ್ರೋಲ್, ಡೀಸೆಲ್ ದರವೂ ಏರಿಕೆಯಾಗಿದೆ. ಸಾಮಾನ್ಯ ಪೆಟ್ರೋಲ್ ದರ ಮೊದಲು 106 ರೂ.ನಿಂದ 108.50 ರೂ. ಆಗಿತ್ತು. ನಾಲ್ಕು ದಿನದ ಹಿಂದೆ 112 ರೂ.ಗೆ ಏರಿಕೆ ಆಗಿತ್ತು. ಈಗ 119.8 ರೂ.ಗೆ ಏರಿಕೆಯಾಗಿದೆ. ಸಾಮಾನ್ಯ ಪೆಟ್ರೋಲ್ ದರ ಲೀಟರ್ಗೆ 7 ರೂ.ನಷ್ಟು ಹೆಚ್ಚಳವಾಗಿದೆ. ಪ್ರೀಮಿಯಂ ಪೆಟ್ರೋಲ್ ದರ ಲೀಟರ್ಗೆ 122.42 ರೂ.ನಿಂದ 129.8ಕ್ಕೆ ಏರಿಕೆಯಾಗಿದೆ.








