ಶಿವಮೊಗ್ಗ : ಶಿವಮೊಗ್ಗದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಜಿಮ್ ಗೆ ನುಗ್ಗಿ ಗ್ಯಾಂಗ್ ಒಂದು ವ್ಯಕ್ತಿಯ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದು ಕೊಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಹೆಚ್ ರಸ್ತೆಯಲ್ಲಿರುವ ಸ್ಮಾರ್ಟ್ ಫಿಟ್ನೆಸ್ ಜಿಮ್ ನಲ್ಲಿ ಈ ಒಂದು ಘಟನೆ ನಡೆದಿದೆ. ಘಟನೆಯಿಂದ ಸಹಜವಾಗಿ ಸ್ಥಳೀಯ ಜನ ಬೆಚ್ಚಿಬಿದ್ದಿದ್ದಾರೆ.
ಇಂದು ಭದ್ರಾವತಿಯ ಬಿ ಹೆಚ್ ರಸ್ತೆಯ ಸ್ಮಾರ್ಟ್ ಫಿಟ್ನೆಸ್ ಜಿಮ್ ನಲ್ಲಿ ಈ ಒಂದು ಘಟನೆ ನಡೆದಿದೆ. ಯುವಕ ಜೋಯಲ್ ಥಾಮ್ಸನ್ ಮೇಲೆ ಮಚ್ಚು ಮತ್ತು ಲಾಂಗ್ ನಿಂದ ದಾಳಿ ನಡೆದಿದೆ. ವಿಶ್ವ ಅಲಿಯಾಸ್ ಮುದ್ದೆ, ಕೋಟೇಶ್ ಅಲಿಯಾಸ್ ಕೋಟಿ, ನವೀನ ಅಲಿಯಾಸ್ ಡಿಂಗ ಸೇರಿದಂತೆ 6 ಜನರ ಗ್ಯಾಂಗ್ನಿಂದ ಈ ಒಂದು ದಾಳಿ ನಡೆದಿದೆ.
ದಾಳಿ ಮಾಡಿರುವ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ಬರುತ್ತಿದ್ದಂತೆ ಗ್ಯಾಂಗ್ ತಕ್ಷಣ ಅಲ್ಲಿಂದ ಪರಾರಿಯಾಗಿದೆ. ಗಾಯಾಳು ಜೋಯಲ್ ಥಾಮ್ಸನ್ ಗೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೋಯೆಲ್ ಮೇಲೆ ಹಲ್ಲೆ ನಡೆಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.