BREAKING : ಶಿರಾ ಉಪಚುನಾವಣೆಗೆ `ಕಾಂಗ್ರೆಸ್’ ಅಭ್ಯರ್ಥಿ ಘೋಷಣೆ! – Kannada News Now


State

BREAKING : ಶಿರಾ ಉಪಚುನಾವಣೆಗೆ `ಕಾಂಗ್ರೆಸ್’ ಅಭ್ಯರ್ಥಿ ಘೋಷಣೆ!

ಬೆಂಗಳೂರು : ಬಹುನಿರೀಕ್ಷಿತ ಶಿರಾ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಸ್ಪರ್ಧಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶಿರಾ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದರು.

ಶಿರಾ ಉಪಚುನಾವಣೆಯನ್ನು ಮಾಜಿ ಗೃಹ ಸಚಿವ ಡಾ. ಪರಮೇಶ್ವರ್ ನೇತೃತ್ವದಲ್ಲಿ ಎದುರಿಸುತ್ತೇವೆ. ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಉಪಾಧ್ಯಕ್ಷರಾಗಿ ಜೊತೆಗೆ ಇರಲಿದ್ದಾರೆ ಎಂದರು.