ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ ಇದೀಗ ಎನ್ ಡಿಆರ್ ಎಫ್ ಸಿಬ್ಬಂದಿ ಮತ್ತೊಂದು ಮೃತದೇಹವನ್ನು ಪತ್ತೆಹಚ್ಚಿದೆ.
ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಇಂದು ಬೆಳಗ್ಗೆ ಎನ್ ಡಿಆರ್ ಎಫ್ ಸಿಬ್ಬಂದಿ ಮತ್ತೊಂದು ಮೃತದೇಹವನ್ನು ಪತ್ತೆಹಚ್ಚಿದ್ದಾರೆ.
ಗುಡ್ಡ ಕುಸಿತ ಸ್ಥಳದಲ್ಲಿ ಮೊದಲು ಓರ್ವ ಮಹಿಳೆ ಶವ ಪತ್ತೆಯಾಗಿತ್ತು. ಬಳಿಕ ನಾಲ್ವರ ಮೃತದೇಹ ಸಿಕ್ಕಿತ್ತು. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಎನ್ ಡಿಆರ್ ಎಫ್ ಸಿಬ್ಬಂದಿ ಇಂದು ಬೆಳಗ್ಗೆಯಿಂದ ಮತ್ತೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ.