ಕೊಪ್ಪಳ : ರಾಜ್ಯದಲ್ಲಿ ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೆ ಇವೆ. ಇದೀಗ ಹಾಡಹಗಲೇ ಮಾನಸಿಕ ಅಸ್ವಸ್ಥೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಕ್ಷೇತ್ರದಲ್ಲಿ ಇಂತಹ ನೀತಿ ಕೃತ್ಯ ನಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹೌದು ಬಸ್ ನಿಲ್ದಾಣದ ಬಳಿಗಿದ್ದ ಮಾನಸಿಕ ಅಸ್ವಸ್ಥೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಎತ್ತಿಸಿಯತ್ನಿಸಿದ್ದಾನೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಮಾನಸಿಕ ಅಶ್ವಸ್ಥೆಯನ್ನು ಕರೆದೋಯ್ದು ಅತ್ಯಾಚಾರಕ್ಕೆ ಯತ್ನಿಸಿದ ದೃಶ್ಯ ಮೊಬೈಲ್ ನಲ್ಲಿ ಸ್ಥಳೀಯರು ಚಿತ್ರೀಕರಿಸಿದ್ದಾರೆ.
ಶಿವರಾಜ್ ತಂಗಡಗಿ ಪ್ರತಿನಿಧಿಸುವ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಈ ಒಂದು ಕೃತ್ಯ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರ ತವರಲ್ಲಿ ಈ ಒಂದು ಅಭದ್ರತೆ ಕಾಡುತ್ತಿದೆ. ಕನಕಗಿರಿ ಕ್ಷೇತ್ರದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ವಾ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರ ವಿರುದ್ಧ ಸೂಕ್ತವಾದ ಕ್ರಮಕ್ಕೆ ಜನರು ಅಗ್ರಹಿಸಿದ್ದಾರೆ.