ಬೆಂಗಳೂರು: ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಅವರು ಗುಣಮುಖರಾಗಿದ್ದು, ನಾಳೆಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಹೌದು, ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿಸಿದ್ದರು. ಇದೀಗ ಸರ್ಜರಿ ಬಳಿಕ ಗುಣಮುಖರಾಗಿದ್ದು, ನಾಳೆಯೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಹೀಗಾಗಿ ಅವರ ಅಭಿಮಾನಿಗಳ ಪೂಜಾಫಲ ಫಲಿಸಿದೆ.
ನಟ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದು, ಆ ಬಳಿಕ ಅವರು ಆಸ್ಪತ್ರೆಯಲ್ಲೇ ಒಂದು ತಿಂಗಳ ಕಾಲ ವಿಶ್ರಾಂತಿಯನ್ನು ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆ ಪಡೆದು ಗುಣಮುಖರಾಗಿ ಬರಲಿ ಅಂತ ದೂರವಾಣಿ ಕರೆ ಮಾಡಿ ಸಿಎಂ ಸಿದ್ಧರಾಮಯ್ಯ ಅವರು ಶುಭ ಹಾರೈಸಿದ್ದರು. ಶಿವಣ್ಣ ಅಭಿಮಾನಿಗಳು ಕೂಡ ದೇವಸ್ಥಾನದಲ್ಲಿ ಪೂಜೆ, ಪುರಸ್ಕಾರದಲ್ಲಿ ತೊಡಗಿದ್ದು, ಬೇಗ ಗುಣಮುಖರಾಗಿ ಬರಲಿ ಅಂತ ಬೇಡಿಕೊಂಡಿದ್ದಾರೆ.