ಬೆಂಗಳೂರು : ರಾಜ್ಯಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ ನಡೆಯುತ್ತಿದ್ದು, ಬೆಳಿಗ್ಗೆಯಿಂದಲೇ ಭಕ್ತರ ದಂಡು ಹರಿದು ಬಂದಿದೆ.
ಶಿವರಾತ್ರಿ ಜಾಗರಣೆಗೆ ದೇವಾಲಯಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಿವನ ದೇವಾಲಯಗಳಲ್ಲಿ ವಿಶೇಷ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಭಕ್ತರಿಗೆ ದೇವಾಲಯಗಳ ಆಡಳಿತ ಮಂಡಳಿಗಳಿಂದ ವ್ಯವಸ್ಥೆ ಮಾಡಲಾಗಿದೆ. ದೇವಾಲಯಗಳಲ್ಲಿ ಬಿಲ್ವಪತ್ರೆ, ಪುಷ್ಪಗಳಿಂದ ಶಿವನನ್ನು ಅಲಂಕರಿಸಲಾಗಿದ್ದು, ಎಲ್ಲೆಡೆ ಅಪಾರ ಸಂಖ್ಯೆಯ ಭಕ್ತರು ದೇವರ ದರ್ಶನ ಪಡೆದುಕೊಂಡಿದ್ದಾರೆ.
ಕಾಡುಮಲ್ಲೇಶ್ವರ, ಧರ್ಮಸ್ಥಳ, ಮುರ್ಡೇಶ್ವರ, ಬೆಂಗಳೂರು ಗವಿಗಂಗಾಧರೇಶ್ವರ ಸೇರಿದಂತೆ ನಾಡಿನ ಶಿವನ ದೇವಾಲಯಗಳಲ್ಲಿ ಭಕ್ತರ ದಂಡೇ ನೆರೆದಿದೆ. ಎಲ್ಲೆಡೆ ಶಿವನಾಮ ಸ್ಮರಣೆ ಮಾಡಲಾಗುತ್ತಿದೆ. ರಾತ್ರಿ ಶಿವರಾತ್ರಿ ಜಾಗರಣೆ ನಡೆಯಲಿದೆ.
#WATCH | Bengaluru, Karnataka: Devotees in huge numbers reached Kadu Malleshwara Temple on Maha Shivratri pic.twitter.com/lodWpF3dL8
— ANI (@ANI) February 26, 2025








