ಬೆಂಗಳೂರು : ಸದ್ಯ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಭಾರಿ ಸದ್ದು ಮಾಡುತ್ತಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರು ಕೂಡ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಮತ್ತೊಂದು ಸುದ್ದಿ ಭಾರಿ ಸದ್ದು ಮಾಡುತ್ತಿದ್ದು ಸಚಿವ ಭೈರತಿ ಸುರೇಶ್ ಅವರು ಬಿಎಸ್ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ಹೊಸ ಬಾಂಬ್ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ. ಬಿಎಸ್ ಯಡಿಯೂರಪ್ಪ ಪಾಪ ಒಳ್ಳೆಯವರು. ಆದರೆ ಮೈತ್ರಾದೇವಿ ಸಾವು ಹೇಗಾಯಿತು?ಮೈತ್ರಾದೇವಿ ಸಾವು ತನಿಖೆಯಾಗಿ ಶೋಭಾ ಕರಂದ್ಲಾಜೆ ಅವರನ್ನು ಬಂಧಿಸಬೇಕು ಈ ಬಗ್ಗೆ ತನಿಖೆ ಆಗಲಿ ಅಂತ ಹೇಳುತ್ತಿದ್ದೇನೆ ಇದನ್ನು ಅವರು ಒಪ್ಪಿಕೊಳ್ಳುತ್ತಾರಾ ಎಂದು ಪ್ರಶ್ನಿಸಿದ್ದಾರೆ.