ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ದಾವಣಗೆರೆಯಲ್ಲಿ ಎಪಿಎಂಸಿ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಪಿಎಂಸಿ ಕೃಷಿ ಮಾರಾಟ ವಿಭಾಗದ ಸಹಾಯಕ ನಿರ್ದೇಶಕ ಜೆ. ಪ್ರಭು ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯಲ್ಲಿರುವ ಪ್ರಭು ನಿವಾಸದ ಮೇಲೆ ದಾಳಿ ನಡೆಸಲಾಗಿದೆ.








