ಬೆಂಗಳೂರು : ರಾಜ್ಯದ ಹಲವಡೆ ಗ್ಯಾಸ್ ಸಿಲಿಂಡರ್ ಕೊರತೆ ಜಾರಿಗೆ ಸಂಬಂಧಪಟ್ಟಂತೆ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಜನರು ಇತಿಮಿತಿಯಲ್ಲಿ ಸಿಲಿಂಡರ್ ಬಳಕೆ ಮಾಡಬೇಕು. ಗ್ಯಾಸ್ ಸಿಲಿಂಡರ್ ಕೇಂದ್ರ ಸರ್ಕಾರದ ವ್ಯಾಪ್ತಿ ಬರುತ್ತದೆ. ನಮ್ಮದೇನಿದ್ದರು ಸಿಲಿಂಡರ್ ವಿತರಣೆ ಮಾಡುವುದಷ್ಟೇ ಕೆಲಸ ಎಂದು ನೆಲಮಂಗಲದಲ್ಲಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ ನೀಡಿದರು.
ಇನ್ನು ಕಾಂಗ್ರೆಸ್ಸಿನ ಹಿರಿಯ ಶಾಸಕರು ದೆಹಲಿ ಪ್ರವಾಸ ಕೈಗೊಂಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಸ್ಥಾನ ಕೇಳಲು ಅವರಿಗೆ ಅಧಿಕಾರ ಇದೆ ಸಚಿವ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಹೈಕಮಾಂಡ್ ತೀರ್ಮಾನ ತೆಗೆದುಕೊಂಡರು ಕೂಡ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಆಹಾರ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದರು.








