ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಒಂದು ದಿನದ ನವಜಾತ ಶಿಶುವನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಶೇಷಾದ್ರಿಪುರಂ ರೈಲ್ವೆ ಪಾರ್ಲರ್ ರಸ್ತೆಯಲ್ಲಿರುವ ಕಸದ ತೊಟ್ಟಿಯಲ್ಲಿ ಒಂದು ದಿನದ ನವಜಾತ ಗಂಡು ಮಗುವಿನ ಪತ್ತೆಯಾಗಿದೆ. ಇದೀಗ ಮಗುವಿನ ಮೃತದೇಹ ವಿಕ್ಟೋರಿಯಾ ಶವಗಾರಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ಶೇಷಾದ್ರಿಪುರಂ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








