ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಸಂಸದ ಇ ತುಕಾರಾಂಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಬಳ್ಳಾರಿಯ ನಿವಾಸದ ಮೇಲೆ ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ಇದರ ಬೆನ್ನಲ್ಲೇ ತುಕಾರಾಮಗೆ ಮತ್ತೊಂದು ಶಾಕ್ ನೀಡಿರುವ ಇಡಿ ಅಧಿಕಾರಿಗಳು, ಬೆಂಗಳೂರಿನ ನಿವಾಸದ ಮೇಲು ದಾಳಿ ಮಾಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ಇರುವಂತಹ ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಬೆಳಿಗ್ಗೆಯಿಂದಲೇ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕೇವಲ ಸಂಸದ ತುಕಾರಾಂ ಅಲ್ಲದೆ ಕಾಂಗ್ರೆಸ್ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಕಂಪ್ಲಿ ಗಣೇಶ್ ಹಾಗೂ ಡಾ. ಶ್ರೀನಿವಾಸ್ ನಿವಾಸದ ಮೇಲು ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.