ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಬೆಳಕಿಗೆ ಬಂದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಸುಮಾ (35) ಎಂಬ ಮಹಿಳೆ 6 ವರ್ಷದ ಪುತ್ರ ಹಾಗೂ 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳನ್ನು ಕೊಂದು ಕುಸುಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು,ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.