ಬೆಂಗಳೂರು : ಇತ್ತೀಚಿಗೆ ರಾಜ್ಯ ಸೇರಿದಂತೆ ಇಡೀ ದೇಶದಲ್ಲಿ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದಾರೆ. ಬೆಂಗಳೂರು ನಗರ ಕೂಡ ಇದೀಗ ಮಹಿಳೆಯರಿಗೆ ಸೇಫ್ ಅಲ್ಲ ಎನ್ನುವಂತಿದೆ. ಇದೀಗ ರಾಜಧಾನಿ ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿಯೇ ಯುವತಿಗೆ ಕಾಮುಕನೊಬ್ಬ ಕೆಟ್ಟದಾಗಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.
ಹೌದು ಬೆಂಗಳೂರಿನಲ್ಲಿ ಮತ್ತೆ ಹೆಚ್ಚಾದ ಕಾಮುಕರ ಉಪಟಳ. ಕತ್ತಲಲ್ಲಿ ಹೋಗುತ್ತಿದ್ದ ಯುವತಿಗೆ ಬ್ಯಾಡ್ ಆಗಿ ಮೈಮುಟ್ಟಿ ಕಿರುಕುಳ ನೀಡಿದ್ದಾನೆ. ಬೈಕ್ ಸವಾರನಿಂದ ನಡು ಬೀದಿಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನವೆಂಬರ್ 11 ರ ರಾತ್ರಿ ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಪುಂಡನ ನೀತಿ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಇದೀಗ ಸೆರೆಯಾಗಿದೆ. ಘಟನೆ ನಡೆದ ಕೂಡಲೇ ಯುವತಿ ರಾಮಮೂರ್ತಿ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಕಾಮುಕ ಅರುಣ್ ಎನ್ನುವ ಆರೋಪಿಯನ್ನು ಕೂಡಲೆ ಅರೆಸ್ಟ್ ಮಾಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.