ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ಮಗನನ್ನು ಕೊಂದು ತಾಯಿ ಮತ್ತು ಅಜ್ಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಎಸ್‌ಜಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೌನೇಶ್ (14) ಎನ್ನುವ ಬಾಲಕನನ್ನು ಕೊಂದು ತಾಯಿ ಸುಧಾ ಹಾಗೂ ಅಜ್ಜಿ ಮುದ್ದಮ್ಮ ಆತ್ಮಹತ್ಯೆಗೆ ಶರಣಾಗಿದ್ದಾರೆ ಪುತ್ರನಿಗೆ ವಿಷ ಕುಡಿಸಿ ತಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ, ಘಟನಾ ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.a








